ಕಲಬುರ್ಗಿ: ಕೋವಿಡ್ ಲಾಕ್‌ಡೌನ್ ನಿಮಿತ್ತ ಪ್ರಯಾಣಿಕರ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (7307) ರೈಲನ್ನು ಇದೇ 20ರಿಂದ ಪುನರಾರಂಭಿಸಲಾಗುತ್ತಿದೆ. ಅಲ್ಲದೇ, ಯಶವಂತಪುರ–ಬೀದರ್ (6271) ರೈಲು ಇದೇ 21ರಿಂದ ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ರೈಲು ನಿಲ್ದಾಣ ಹಾಗೂ ರೈಲಿನಲ್ಲಿ ಪ್ರಯಾಣಿಕರು ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದೂ ಮನವಿ ಮಾಡಿದೆ. ಸದ್ಯಕ್ಕೆ ರೈಲ್ವೆಯು ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.