ADVERTISEMENT

ಕಲಬುರ್ಗಿ: ಬಸವ ಪುತ್ಥಳಿಗೆ ಪುಷ್ಪಾರ್ಚಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2021, 9:35 IST
Last Updated 14 ಮೇ 2021, 9:35 IST
ಕಲಬುರ್ಗಿಯಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚಣೆ ಮಾಡಲಾಯಿತು
ಕಲಬುರ್ಗಿಯಲ್ಲಿ ಶುಕ್ರವಾರ ಜಿಲ್ಲಾಡಳಿತದ ವತಿಯಿಂದ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚಣೆ ಮಾಡಲಾಯಿತು   

ಕಲಬುರ್ಗಿ: ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವವನ್ನು ಶುಕ್ರವಾರ ಜಿಲ್ಲೆಯಾದ್ಯಂತ ಸರಳವಾಗಿ ಆಚರಿಸಲಾಯಿತು.

ನಗರದ ಜಗತ್ ವೃತ್ತದ ಬಳಿಯ ಬಸವೇಶ್ವರರ ಪುತ್ಥಳಿಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೇರಿದಂತೆ ಹಿರಿಯ ಅಧಿಕಾರಿಗಳು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮಹಾ ಮಾನವತಾವಾದಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜ್ಯೋತ್ಸ್ನಾ, ‘ಕೋವಿಡ್ ಎರಡನೇ ಅಲೆ ಪ್ರಬಲವಾಗಿರುವ ಕಾರಣ ಜನರ ಸುರಕ್ಷತೆಯು ದೃಷ್ಟಿಯಿಂದ ಮಹಾತ್ಮರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿದೆ. ಅದರಂತೆ ಸಾರ್ವಜನಿಕರು ತಮ್ಮ ಮನೆಯಲ್ಲಿ ಬಸವೇಶ್ವರರನ್ನು ಪೂಜಿಸಿ ಜಯಂತಿ ಆಚರಿಸಬೇಕು. ಯಾವುದೇ ರೀತಿಯಲ್ಲಿ ಉತ್ಸವ, ಮೆರವಣಿಗೆ, ಗುಂಪುಗೂಡುವು ಆಚರಣೆ ಮಾಡಬಾರದು’ ಎಂದು ಮನವಿ ಮಾಡಿದರು.

ADVERTISEMENT

ನಗರ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ್, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ವೀರಶೈವ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು‌ ಮೋದಿ, ಜಿಲ್ಲಾ ಆರೋಗ್ಯ ಇಲಾಖೆಯ ಮೇಲ್ವಿಚಾರಕ ಮಂಜುನಾಥ ಕಂಬಳಿಮಠ ಸೇರಿದಂತೆ ಹಲವು ಗಣ್ಯರು ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.