ಕಲಬುರಗಿ: ನಗರದಲ್ಲಿ ಬಸವಣ್ಣನವರ 892ನೇ ಜಯಂತ್ಯುತ್ಸವ ಪ್ರಯುಕ್ತ ಏಪ್ರಿಲ್ 29ರಂದು ಸಂಜೆ 4.30ಕ್ಕೆ ಮಹಿಳೆಯರ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಲಾ ಕಣ್ಣಿ, ಜ್ಯೋತಿ ಮರಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶರಣಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಬೈಕ್ ರ‍್ಯಾಲಿ ಸೂಪರ್ ಮಾರ್ಕೆಟ್ ಮತ್ತು ಸರ್ದಾರ್ ವಲ್ಲಭಾಬಾಯಿ ಪಟೇಲ್ ವೃತ್ತದ ಮೂಲಕ ಹಾದು ಮತ್ತೆ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಬಸವ ಪ್ರಜ್ಞೆ ಮೂಡಿಸುವುದರ ಜತೆಗೆ ಬಸವಣ್ಣನವರು ಮಹಿಳಾಲೋಕಕ್ಕೆ ನೀಡಿದ ಕೊಡುಗೆಗಳ ಪ್ರಚಾರಕ್ಕಾಗಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಬೈಕ್ ರ‍್ಯಾಲಿಯಲ್ಲಿ ವಿದ್ಯಾರ್ಥಿನಿಯರು, ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.