ADVERTISEMENT

ಸಿದ್ದರಾಮಯ್ಯಗೆ ಖರ್ಗೆ ಪ್ರಧಾನಿಯಾಗುವುದು ಇಷ್ಟವಿಲ್ಲ: ಬಸವರಾಜ ಬೊಮ್ಮಾಯಿ 

​ಪ್ರಜಾವಾಣಿ ವಾರ್ತೆ
Published 21 ಮೇ 2024, 15:20 IST
Last Updated 21 ಮೇ 2024, 15:20 IST
<div class="paragraphs"><p>ಬಸವರಾಜ ಬೊಮ್ಮಾಯಿ&nbsp;</p></div>

ಬಸವರಾಜ ಬೊಮ್ಮಾಯಿ 

   

ಕಲಬುರಗಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹುಶಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ನೋಡುವ ಇಚ್ಛೆ ಇಲ್ಲದಂತೆ ಕಂಡುಬರುತ್ತದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಕುಟುಕಿದರು.

‘ಕರ್ನಾಟಕದಿಂದ ಯಾರೂ ಪ್ರಧಾನಿ ಆಗುವುದಿಲ್ಲ’ ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿನ ಮತದಾನ ಮುಗಿದ ಬಳಿಕ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ಕೊಟ್ಟಿದ್ದಾರೆ ಅನಿಸುತ್ತಿದೆ. ‘ಇಂಡಿಯಾ’ ಮೈತ್ರಿಕೂಟದ ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಅಭ್ಯರ್ಥಿಗೆ ಖರ್ಗೆ ಹೆಸರು ಪ್ರಸ್ತಾಪಿಸಿದ್ದರು. ಅದಕ್ಕೆ ಕಾಂಗ್ರೆಸ್ಸಿಗರೇ ಒಪ್ಪಿಗೆ ನೀಡಲಿಲ್ಲ. ಇದು ಅವರೊಳಗಿನ ನಾಯಕತ್ವದ ಬಿಕ್ಕಟ್ಟನ್ನು ತೋರಿಸುತ್ತದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.