ADVERTISEMENT

ಬಸವರಾಜ ಪಾಟೀಲ ಸೇಡಂ 21ನೇ ಶತಮಾನದ ‌ಬಸವಣ್ಣ: ದತ್ತಾತ್ರೇಯ ಪಾಟೀಲ ರೇವೂರ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 8:12 IST
Last Updated 14 ಆಗಸ್ಟ್ 2022, 8:12 IST
   

ಕಲಬುರಗಿ: 'ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ‌ಕಂಡ ಕನಸುಗಳನ್ನು ಸಾಕರಗೊಳಿಸಲು ಪ್ರಯತ್ನಿಸುತ್ತಿರುವ ಬಸವರಾಜ ಪಾಟೀಲ ಸೇಡಂ ಅವರು 21ನೇ ಶತಮಾನದ ‌ಬಸವಣ್ಣ' ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ‌ ಕಲಬುರಗಿ ವಿಭಾಗದ ನೂತನ ಕಟ್ಟಡ ಅರಿವಿನ ಮನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಅಂದಿನ ಅನುಭವ ಮಂಟಪ ಹೇಗಿತ್ತು ಎಂಬುವುದನ್ನು ನಾವು ಯಾರೂ ಕಂಡಿಲ್ಲ. ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ನಿರ್ಮಾಣ ಆಗುತ್ತಿರುವ ನೂತನ ಅನುಭವ ಮಂಟಪ, ಬಸವಣ್ಣನವರ ಕಾಲದ ಅನುಭವ ಮಂಟಪದ ಕಾರ್ಯಗಳು ನಮಗೆ ಪರಿಚಯಿಸಲಿದೆ' ಎಂದರು.

ADVERTISEMENT

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿ ಆವರಣದಲ್ಲಿ ₹2.55 ಕೋಟಿ ವೆಚ್ಚದ ಅರಿವಿನ ಮನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ ಉದ್ಘಾಟಿಸಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಶಾಸಕರಾದ ಶಶೀಲ್ ಜಿ ನಮೋಶಿ, ಡಾ.ಅವಿನಾಶ ಜಾದವ, ಬಿಜಿ ಪಾಟೀಲ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಕೆಕೆಆರ್‌ಡಿಬಿ ಕಾರ್ಯದರ್ಶಿ ಆರ್ ವೆಂಕಟೇಶಕುಮಾರ, ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್, ಮಹಾನಗರ ಪಾಲಿಕೆ ಆಯುಕ್ತ ಭೂವನೇಶ ಪಾಟೀಲ ದೇವದಾಸ, ಜಿ.ಪಂ ಸಿಇಒ ಡಾ.ಗಿರೀಶ ಡಿ.ಬದೋಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.