ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಶನಿವಾರ ಸಂಜೆವರೆಗೆ 22 ಕ್ರಸ್ಟ್ ಗೇಟ್ಗಳ ಮೂಲಕ 1.8 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ. ಹೂವಿನಹೆಡಗಿ ಗ್ರಾಮದ ಐತಿಹಾಸಿಕ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದ್ದು, ತಾಲ್ಲೂಕಿನ ಸುಮಾರು 40ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
2.40 ಲಕ್ಷ ಕ್ಯೂಸೆಕ್ ನೀರು ಹರಿಸಿದರೆ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿದಿದ್ದರಿಂದ ಒಳ ಹರಿವು ಮತ್ತಷ್ಟು ಹೆಚ್ಚಾಗಿದೆ. ಭಾನುವಾರ ಇನ್ನಷ್ಟು ಹೆಚ್ಚಿನ ನೀರು ಬಿಡುವ ಸಾದ್ಯತೆಯಿದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಚನ್ನಮಲ್ಲಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.