
ಕಲಬುರಗಿ: ‘ಗುಲಬರ್ಗಾ ವಿಶ್ವವಿದ್ಯಾಲಯದ ಬಿ.ಇಡಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಕಾರಣ ಏಕವ್ಯಕ್ತಿ ಸತ್ಯಶೋಧನಾ ಸಮಿತಿ ತನಿಖೆ ನಡೆಸುತ್ತಿದೆ. ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕಾರಣ ತಿದ್ದುಪಡಿಯಾದ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಗುವಿವಿ ಅನುಮತಿ ಕೋರಿದೆ. ಪ್ರಸ್ತಾವ ಕಾನೂನು ಇಲಾಖೆಯ ಪರಿಗಣನೆಯಲ್ಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ‘2024ನೇ ಸಾಲಿನ ಬಿ.ಇಡಿ 2 ಹಾಗೂ 4ನೇ ಸೆಮಿಸ್ಟರ್‌ನ ಉತ್ತರ ಪತ್ರಿಕೆಗಳನ್ನು ತಿದ್ದುಪಡಿ ಮಾಡಲಾಗಿದೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ವಿಶ್ವವಿದ್ಯಾಲಯವು ಇಲಾಖೆಯನ್ನು ಕೋರಿತ್ತು. ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು ತನಿಖೆಗೆ ಏಕವ್ಯಕ್ತಿ ಸತ್ಯಶೋಧನಾ ಸಮಿತಿ ರಚಿಸಿದ್ದರು. ತನಿಖೆ ಪ್ರಗತಿಯಲ್ಲಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.