ಕಲಬುರ್ಗಿ: ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ ಗಡಿಯಲ್ಲಿರುವ ಎಲ್ಲ ಪ್ರದೇಶಗಳು ಕರ್ನಾಟಕಕ್ಕೆ ಸೇರಿವೆ. ಈ ಸಂಬಂಧ ಮಹಾಜನ್ ವರದಿಯೇ ಅಂತಿಮ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಇಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಸಂಬಂಧ ಅನಗತ್ಯ ವಿವಾದ ಉಂಟು ಮಾಡುತ್ತಿದ್ದಾರೆ. ಬೆಳಗಾವಿ ನಮ್ಮದು ಎಂದು ಹೇಳುವ ಉದ್ದೇಶದಿಂದಲೇ ಬೆಳಗಾವಿಯಲ್ಲಿ ಸುವರ್ಣ ಸೌಧವನ್ನು ನಿರ್ಮಿಸಲಾಗಿದೆ ಎಂದರು.
ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿರುವ ಸಿ.ಡಿ. ಬಗ್ಗೆ ಬರುವ ಅಧಿವೇಶನದಲ್ಲಿ ಮಾತನಾಡುತ್ತೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.