ADVERTISEMENT

ಜೇವರ್ಗಿ: ಬಿಇಒ ವೆಂಕಯ್ಯ ಇನಾಮದಾರ ವರ್ಗಾವಣೆ ರದ್ದುಪಡಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 4:07 IST
Last Updated 25 ಜನವರಿ 2022, 4:07 IST
ಜೇವರ್ಗಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರ ವರ್ಗಾವಣೆ ರದ್ದುಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು
ಜೇವರ್ಗಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರ ವರ್ಗಾವಣೆ ರದ್ದುಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು   

ಜೇವರ್ಗಿ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅವರನ್ನು ಜೇವರ್ಗಿಯಿಂದ ಯಾದಗಿರಿ ಜಿಲ್ಲೆಯ ಡಯಟ್ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆ ಮಾಡಿರುವುದನ್ನು ತಕ್ಷಣ ರದ್ದುಗೊಳಿಸಬೇಕು. ಇನಾಮದಾರ ಅವರು ಪ್ರಾಮಾಣಿಕ, ದಕ್ಷ ಅಧಿಕಾರಿಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷವೂ ಪೂರ್ಣಗೊಂಡಿಲ್ಲ. ಇನಾಮದಾರ ಅವರು ಅಧಿಕಾರ ವಹಿಸಿಕೊಂಡ ನಂತರ ತಾಲ್ಲೂಕಿನಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ ಕೋಳಕೂರ, ಶಿವಕುಮಾರ ಹೆಗಡೆ, ಬಸವರಾಜ ಕಟ್ಟಿ, ಮರೆಪ್ಪ ಆಂದೋಲಾ, ಶ್ರೀನಾಥ ಕಟ್ಟಿಸಂಗಾವಿ, ದೇವರಾಜ ಕಟ್ಟಿಮನಿ, ಅಶೋಖ ಹರವಾಳ, ಕಲ್ಲಪ್ಪ ಪೂಜಾರಿ ರಾಸಣಗಿ, ಲಕ್ಷ್ಮಣ ಡೊಳ್ಳೆ, ನಿಂಗಣ್ಣ ಧರೇನ್ ಸೊನ್ನ, ಪ್ರಭುನಂದ ಕಟ್ಟಿಮನಿ, ದೇವರಾಜ ಬಣಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.