ಚಿಂಚೋಳಿ: ‘2006-07ರಲ್ಲಿ ಜನಿಸಿದ ಭಾಗ್ಯಲಕ್ಷ್ಮಿ ಯೋಜನೆಯ 18 ವರ್ಷ ತುಂಬಿದ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್‌ನ ಪರಿಪಕ್ವ ಮೊತ್ತ ಪಡೆಯಲು ಅ.30 ಕೊನೆಯ ದಿನವಾಗಿದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ತಿಳಿಸಿದ್ದಾರೆ.
‘ಅರ್ಹ ಫಲಾನುಭವಿಗಳು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲೆಗಳನ್ನು ಸಿಡಿಪಿಒ ಕಚೇರಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ದಾಖಲೆಗಳನ್ನು ಸಲ್ಲಿಸದೇ ಇರುವವರು ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರು ಮತ್ತು ಕಾರ್ಯಕರ್ತೆಯರಿಂದ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.