ADVERTISEMENT

ಸೊನ್ನ ಭೀಮಾ ಬ್ಯಾರೇಜಿನಿಂದ 7.80 ಲಕ್ಷ‌ ಕ್ಯುಸೆಕ್ ‌ನೀರು ಬಿಡುಗಡೆ!

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 2:20 IST
Last Updated 17 ಅಕ್ಟೋಬರ್ 2020, 2:20 IST
ಭೀಮಾ ನದಿಯಲ್ಲಿ ಪ್ರವಾಹ
ಭೀಮಾ ನದಿಯಲ್ಲಿ ಪ್ರವಾಹ   

ಕಲಬುರ್ಗಿ: ಶನಿವಾರ ಬೆಳಿಗ್ಗೆ 5.30ರಿಂದ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ ದಾಖಲೆಯ 7.80 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ.

ಇದು ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಅಫಜಲಪುರ, ಜೇವರ್ಗಿ, ಕಲಬುರ್ಗಿ, ಚಿತ್ತಾಪುರ, ಶಹಾಬಾದ್ ಹಾಗೂ ಸೇಡಂ ತಾಲ್ಲೂಕಿನ 157 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ADVERTISEMENT

ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯಗಳಿಂದ 8 ಲಕ್ಷ ಕ್ಯುಸೆಕ್ ನೀರನ್ನು ‌ಹರಿಸಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರು ಸೊನ್ನ ಭೀಮಾ ಬ್ಯಾರೇಜ್ ಈಗಾಗಲೇ ಭರ್ತಿಯಾಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.