ADVERTISEMENT

ಭೀಮಾ ತೀರದಲ್ಲಿ ಪ್ರವಾಹ: ಸುರಕ್ಷಿತ ಸ್ಥಳಗಳಿಗೆ ತೆರಳಲು ಜನರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 8:49 IST
Last Updated 17 ಅಕ್ಟೋಬರ್ 2020, 8:49 IST
ಭೀಮಾ ನದಿ
ಭೀಮಾ ನದಿ   

ಕಲಬುರ್ಗಿ:ಅಫಜಲಪುರ ತಾಲ್ಲೂಕಿನ ಸೊನ್ನ ಬ್ಯಾರೇಜ್ ನಿಂದ ಶನಿವಾರ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆ ಇದ್ದು, ಇದು ಭೀಕರ ಪ್ರವಾಹದ ಮುನ್ಸೂಚನೆ ಯಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ದಂಡೆಯ ಗ್ರಾಮಸ್ಥರು ಕೂಡಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೆ 2 ಎನ್.ಡಿ.ಆರ್.ಎಫ್. ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿದೆ. ಇದಲ್ಲದೆ ಎಸ್.ಡಿ.ಅರ್.ಎಫ್., ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ಚಹಿಸುತ್ತಿದ್ದಾರೆ.

ಇದಲ್ಲದೆ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯಕ್ಕೆ ಮತ್ತು ಅತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.