ADVERTISEMENT

ಭೀಮಾ ಪ್ರವಾಹ: ದೇಗುಲ ಜಲಾವೃತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 21:20 IST
Last Updated 16 ಆಗಸ್ಟ್ 2022, 21:20 IST
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮಣ್ಣೂರು ಹೊಳೆ ಯಲ್ಲಮ್ಮ ದೇವಸ್ಥಾನ ಜಲಾವೃತವಾಗಿದೆ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮಣ್ಣೂರು ಹೊಳೆ ಯಲ್ಲಮ್ಮ ದೇವಸ್ಥಾನ ಜಲಾವೃತವಾಗಿದೆ   

ಅಫಜಲಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್‌ನಿಂದ 1 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮಂಗಳವಾರ ಮಣ್ಣೂರಿನ ಹೊಳೆ ಯಲ್ಲಮ್ಮ ದೇವಸ್ಥಾನ ಜಲಾವೃತವಾಗಿದೆ.

‘ಜಲಾವೃತವಾಗಿರುವ ಕಾರಣ ದೇವಸ್ಥಾನದಲ್ಲಿ ಸದ್ಯಕ್ಕೆ ಪೂಜೆ ಮಾಡಲು ಆಗುವುದಿಲ್ಲ. ಪ್ರವಾಹ ಇಳಿಮುಖವಾದ ನಂತರವಷ್ಟೇ ಪೂಜಾ ಕಾರ್ಯ ನಡೆಯಲಿದೆ’ ಎಂದು ದೇವಸ್ಥಾನದ ಅರ್ಚಕರಾದ ಸಚಿನ್ ಪೂಜಾರಿ ಮತ್ತು ದಾನಪ್ಪ ಪೂಜಾರಿ ತಿಳಿಸಿದ್ದಾರೆ.

‘ಮಣ್ಣೂರ ಗ್ರಾಮದ ಬಳಿ ಸೇತುವೆ ತುಂಬಿ ಹರಿಯುತ್ತಿದೆ. ಗ್ರಾಮದ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ನೀರು ಆವರಿಸಿಕೊಂಡಿದೆ. ನದಿಗೆ ನೀರು ಹೆಚ್ಚು ಬಂದಿರುವುದರಿಂದ ಹಿನ್ನೀರಿನಿಂದ ಬಂಕಲಗಿ ಗ್ರಾಮದ ಬೋರಿ ಹಳ್ಳಗಳು ತುಂಬಿ ಹರಿಯುತ್ತಿವೆ. ಹಿನ್ನೀರಿನಿಂದ ಮುಂಗಾರು ಹಂಗಾಮಿನ ಬೆಳೆ ಹಾಳಾಗುತ್ತಿವೆ’ ಎಂದು ರೈತರು ಹೇಳಿದ್ದಾರೆ.

ADVERTISEMENT

ಇಂದು ರಾಜ್ಯದ ಕೆಲವೆಡೆ ಮಳೆ: (ಬೆಂಗಳೂರು ವರದಿ): ಕರಾವಳಿಯ ಬಹುತೇಕ ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಬುಧವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಗುಡುಗು ಸಹಿತ ಮಳೆಯಾಗಲಿದೆ. ಆದರೆ,ಭಾರಿ ಮಳೆಯಾಗುವ ಸಾಧ್ಯತೆಯಿಲ್ಲ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.