ADVERTISEMENT

ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ: ಲೋಕನಾಯಕ ಕೃತಿ ಬಿಡುಗಡೆ

ಜಿ.ಪಂ. ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2023, 14:36 IST
Last Updated 15 ನವೆಂಬರ್ 2023, 14:36 IST
ಭೀಮಣ್ಣ ಖಂಡ್ರೆ
ಭೀಮಣ್ಣ ಖಂಡ್ರೆ    

ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಗೌರವ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರ ಜನ್ಮಶತಮಾನೋತ್ಸವ ಡಿ.2ರಂದು ಭಾಲ್ಕಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ.ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ತಿಳಿಸಿದರು.

ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಮಾಜದ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದರು. ‘ಭೀಮಣ್ಣ ಖಂಡ್ರೆ ಅವರು ಶಾಸಕರಾಗಿ, ಸಚಿವರಾಗಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ಶ್ರಮಿಸಿದ್ದಾರೆ. ಗುರುವಿರಕ್ತರನ್ನು ಒಂದೇ ವೇದಿಕೆಯಲ್ಲಿ ತಂದ ಖ್ಯಾತಿ ಹೊಂದಿರುವ ಹಿರಿಯ ನಾಯಕರಾಗಿದ್ದಾರೆ’ ಎಂದರು.

‘ಮಠ ಮಾನ್ಯಗಳ ಮಾರ್ಗದರ್ಶನದಲ್ಲಿ ಸಮಾಜದ ಉನ್ನತಿಗೆ ಶ್ರಮಿಸಿದ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಲೋಕನಾಯಕ ಎಂಬ ಕೃತಿ ಬಿಡುಗಡೆ ನಡೆಯಲಿದೆ’ ಎಂದರು.

ADVERTISEMENT

ಸಮಾರಂಭಕ್ಕೆ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ನೂರಾರು ಮಠಾಧೀಶರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಪಕ್ಷಗಳ ಖಂಡ್ರೆ ಅವರ ಒಡನಾಡಿಗಳನ್ನು ಆಹ್ವಾನಿಸಲಾಗಿದ್ದು ಎಲ್ಲರೂ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳಲಿದ್ದು, ಚಿಂಚೋಳಿ ತಾಲ್ಲೂಕಿನಿಂದ ಸುಮಾರು 5 ಸಾವಿರಕ್ಕಿಂತ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲ್ಲೂಕು ಅಧ್ಯಕ್ಷ ಚಿತ್ರಶೇಖರ ಪಾಟೀಲ ಸಹಿತ ಪದಾಧಿಕಾರಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.