ADVERTISEMENT

ಭುವನೇಶ ಪಾಟೀಲ ಕಲಬುರಗಿ ಪಾಲಿಕೆಯ ನೂತನ ಆಯುಕ್ತ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 13:51 IST
Last Updated 7 ಜೂನ್ 2022, 13:51 IST
ಭುವನೇಶ ಪಾಟೀಲ
ಭುವನೇಶ ಪಾಟೀಲ   

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ನೂತನ ಆಯುಕ್ತರನ್ನಾಗಿ 2018ನೇ ವೃಂದದ ಐಎಎಸ್‌ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಆಯುಕ್ತರಾಗಿದ್ದ ಕೆಎಎಸ್ ಅಧಿಕಾರಿ ಶಂಕ್ರಪ್ಪ ವಣಿಕ್ಯಾಳ ಅವರನ್ನು ಭ್ರಷ್ಟಾಚಾರ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂನ್ 1ರಂದು ರಾತ್ರಿ ಬಂಧಿಸಿದ್ದರು. ಹೀಗಾಗಿ, ಒಂದು ವಾರದಿಂದ ಆಯುಕ್ತರ ಹುದ್ದೆ ಖಾಲಿ ಇತ್ತು. ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.

ಭುವನೇಶ ಪಾಟೀಲ ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.