ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ 9.34ನಿಮಿಷಕ್ಕೆ ಹಾಗೂ ಮಧ್ಯಾಹ್ನ 3ಕ್ಕೆ ಭೂಮಿಯಿಂದ ಭಾರಿ ಸದ್ದು ಕೇಳಿಸಿದೆ ಎಂದು ಗ್ರಾಮದ ಮುಖಂಡ ರೇವಣಸಿದ್ದಪ್ಪ ಅಣಕಲ್ ತಿಳಿಸಿದ್ದಾರೆ.
ಒಂದೇ ನಿಮಿಷದಲ್ಲಿ ಮೂರು ಭೂಮಿಯಿಂದ ಸ್ಫೋಟಕ ಮಾದರಿ ಸದ್ದು ಕೇಳಿ ಬಂದಿರುವುದರಿಂದ ಗಾಬರಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದು ರಸ್ತೆಯಲ್ಲಿ ನಿಂತಿದ್ದೇವೆ ಎಂದರು.
ಗ್ರಾಮದಲ್ಲಿ ನಿರಂತರ ಭೂಮಿಯಿಂದ ಸ್ಫೋಟಕ ಸದ್ದು ಕೇಳಿ ಬರುತ್ತಿರುವುದರಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.