
ಪ್ರಜಾವಾಣಿ ವಾರ್ತೆ
ಕಲಬುರಗಿ: ಬಿಹಾರ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವಿನತ್ತ ಸಾಗಿದ್ದು, ನಗರದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.
'ನರೇಂದ್ರ ಮೋದಿ ನೀವು ಮುನ್ನುಗ್ಗಿ ನಾವು ನಿಮ್ಮೊಂದಿಗೆ ಇದ್ದೇವೆ', 'ದೇಶದ ನಾಯಕ ಹೇಗಿರಬೇಕು, ಪ್ರಧಾನಿ ನರೇಂದ್ರ ಮೋದಿಯಂತಿರಬೇಕು' ಎಂದು ಘೋಷಣೆ ಮೊಳಗಿಸಿದರು. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ ಮಾತನಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಜಿಲ್ಲಾ, ಮಂಡಲ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.