ADVERTISEMENT

ವಾಡಿ: ಬೈಕ್‌ ಡಿಕ್ಕಿಯಾಗಿ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 1:20 IST
Last Updated 22 ಜೂನ್ 2021, 1:20 IST

ವಾಡಿ: ಸಮೀಪದ ರೇವೂರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ–150ರಲ್ಲಿ ಸೋಮವಾರ ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಂದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಳಗಿ ತಾಲ್ಲೂಕಿನ ಕಂದಗೋಳ ನಿವಾಸಿ ಶಾಂತಯ್ಯ ಗುತ್ತೇದಾರ (46) ಮೃತಪಟ್ಟವರು. ಇನ್ನೊಬ್ಬ ಬೈಕ್ ಸವಾರ ಸುಭಾಷ್ ಸಾ.ಯಲೇರಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನು ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT