ADVERTISEMENT

ಕಲಬುರಗಿ: 149 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಗೆಲುವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 9:02 IST
Last Updated 14 ಡಿಸೆಂಬರ್ 2021, 9:02 IST
ಗುಲಬರ್ಗಾ ವಿಶ್ವವಿದ್ಯಾಲಯದ ಅವರಣದಲ್ಲಿನ ಮತ ಎಣಿಕೆ ಕೇಂದ್ರದ ಬಳಿ ಬಿ.ಜಿ. ಪಾಟೀಲ ‌ಬೆಂಬಲಿಗರು ವಿಜಯೋತ್ಸವ ಆಚರಿಸಿದರು
ಗುಲಬರ್ಗಾ ವಿಶ್ವವಿದ್ಯಾಲಯದ ಅವರಣದಲ್ಲಿನ ಮತ ಎಣಿಕೆ ಕೇಂದ್ರದ ಬಳಿ ಬಿ.ಜಿ. ಪಾಟೀಲ ‌ಬೆಂಬಲಿಗರು ವಿಜಯೋತ್ಸವ ಆಚರಿಸಿದರು   

ಕಲಬುರಗಿ: ಕಲಬುರಗಿ-ಯಾದಗಿರಿ ವಿಧಾನಪರಿಷತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ ಅವರು 149 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿ.ಜಿ. ಪಾಟೀಲ ಅವರು 3,452 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಮರತೂರ ಅವರು 3,303 ಮತಗಳನ್ನು ಪಡೆದರು. ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಕೋಡ್ಲಿ 16 ಮತಗಳನ್ನು ಪಡೆದು ಠೇವಣಿ ‌ಕಳೆದುಕೊಂಡರು.

298 ಮತಗಳು ತಿರಸ್ಕೃತಗೊಂಡವು. ಚಲಾವಣೆಯಾದ 7069ಮತಗಳಲ್ಲಿ 6771 ಮತಗಳು ಮಾತ್ರ ಸಿಂಧುವಾಗಿದ್ದವು.

ADVERTISEMENT

ಈ ಕ್ಷೇತ್ರದಿಂದ ಮರು ಆಯ್ಕೆಯಾದ ಮೊದಲ ವ್ಯಕ್ತಿ ಬಿ.ಜಿ. ಪಾಟೀಲ ಅವರಾಗಿದ್ದಾರೆ.

ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ಶಿವಾನಂದ ಪಾಟೀಲ ಮರತೂರ ಉತ್ತಮ‌ ಪೈಪೋಟಿ ನೀಡಿದರು.

ಶಾಸಕರ ಗೈರು: ಬಿ.ಜಿ. ಪಾಟೀಲ ಅವರು ಗೆಲುವು ಸಂಭ್ರಮಿಸುವ ಸಂದರ್ಭದಲ್ಲಿ ಜಿಲ್ಲೆಯ ಸಂಸದ, ಶಾಸಕರು, ಪ್ರಮುಖ ಬಿಜೆಪಿ ನಾಯಕರು ಗೈರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.