ADVERTISEMENT

ಮಣಿಕಂಠ ರಾಠೋಡ ವಿರುದ್ಧ ಮತ್ತೊಂದು ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 7:54 IST
Last Updated 11 ಡಿಸೆಂಬರ್ 2025, 7:54 IST
ಮಣಿಕಂಠ ರಾಠೋಡ
ಮಣಿಕಂಠ ರಾಠೋಡ   

ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ಪ್ರಕರಣ ದಾಖಲಾಗಿದೆ.

‘ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ನನಗೂ ಗುತ್ತಿಗೆದಾರ ಪ್ರಭು ರಾವೂರ ನಡುವೆ ತಕರಾರಿದೆ. ಈ ಸಂಬಂಧ ನಾನು ಪ್ರಭು ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೆ. ಈ ಪ್ರಕರಣದಲ್ಲಿ ವಿಚಾರಣೆ ಇತ್ತಾದ್ದರಿಂದ ಹಾಜರಾಗಲು ಜಿಲ್ಲಾ ನ್ಯಾಯಾಲಯಕ್ಕೆ ಹೋಗಿದ್ದೆ. ಈ ವೇಳೆ ಬಂದ ಮಣಿಕಂಠ ರಾಠೋಡ ನೀನು ಪ್ರಭು ವಿರುದ್ಧದ ದೂರು ಹಿಂಪಡೆಯಬೇಕು. ಇಲ್ಲದಿದ್ದರೆ ಜೀವಸಹಿತ ಬಿಡಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಜೈ ಭೀಮ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ ರಾಮು ರಾಠೋಡ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ನಗರದ ಸ್ಟೇಷನ್‌ ಬಜಾರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.