ADVERTISEMENT

SCSP, TSP ಅನುದಾನ ‌ಗ್ಯಾರಂಟಿಗೆ ಬಳಕೆ: ಕಾಂಗ್ರೆಸ್‌ ‌ವಿರುದ್ಧ BJP ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 7:42 IST
Last Updated 11 ಆಗಸ್ಟ್ 2025, 7:42 IST
<div class="paragraphs"><p>ಕಲಬುರಗಿಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ‌ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p></div>

ಕಲಬುರಗಿಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ‌ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

   

ಕಲಬುರಗಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ದಲಿತ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬಳಸುವುದನ್ನು ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಕಲಬುರಗಿ ಜಿಲ್ಲಾ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ‌ನಡೆಸಲಾಯಿತು.

ನಗರದ ಸರ್ದಾರ್‌ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದಲಿತ ವಿರೋಧಿ‌ ಕಾಂಗ್ರೆಸ್ ‌ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ‌ಮೊಳಗಿಸಿದರು.

ADVERTISEMENT

ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ‌ ಕಚೇರಿ ಎದುರಿನ ಐವಾನ್ ಎ‌ ಶಾಹಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಅವರನ್ನು ಪೊಲೀಸರು ಗೇಟ್‌ನಲ್ಲೇ ತಡೆದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ‌ ಕಚೇರಿ ಸಲ್ಲಿಸಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ‌ ರಾಜ್ಯ ಉಪಾಧ್ಯಕ್ಷ ಎನ್.‌ಮಹೇಶ್ ಸೇರಿದಂತೆ ಹಲವು ಬಿಜೆಪಿ‌ ಮುಖಂಡರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.