ಜೇವರ್ಗಿ: ಮಳೆಯಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಸಾಕಷ್ಟು ಹಾನಿಯಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಆದರೂ ಶಾಸಕ ಡಾ.ಅಜಯಸಿಂಗ್ ಜನರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ‘ಕ್ಷೇತ್ರದಲ್ಲಿ ಭಾರಿ ಮಳೆ ಹಾಗೂ ಭೀಮಾ ನದಿ ಪ್ರವಾಹದಿಂದ ಅಪಾರ ಹಾನಿಯಾಗಿದೆ. ನೂರಾರು ಮನೆಗಳು ಕುಸಿದು ಬಿದ್ದಿವೆ. ಕುರಿಗಳು ಸಾವನಪ್ಪಿವೆ. ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ’ ಎಂದರು.
ಪಟ್ಟಣದಲ್ಲಿ ಅವೈಜ್ಞಾನಿಕ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣದಿಂದ ಅವಾಂತರ ಸೃಷ್ಟಿಯಾಗಿದೆ. ಜನರ ಸಮಸ್ಯೆಗೆ ಸ್ಪಂದಿಸದ ಹಾಗೂ ಕೆಲಸಕ್ಕೆ ಬಾರದ ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕಿನಲ್ಲಿ ಸಾಕಷ್ಟು ಹಾನಿಯಾದರೂ ಶಾಸಕ ಡಾ.ಅಜಯಸಿಂಗ್ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಪಂ ಮಾಜಿ ಸದಸ್ಯೆ ಶೋಭಾ ಬಾಣಿ, ಬಾಬು ಪಾಟೀಲ ಮುತ್ತಕೋಡ, ಭಾಗೇಶ ಹೋತಿನಮಡು, ಸಂತೋಷ ಮಲ್ಲಾಬಾದ, ಖಯೂಮ್ ಜಮಾದಾರ, ದೇವಿಂದ್ರ ಸುಬೇದಾರ, ಸೂರಿ ಹಿಪ್ಪರಗಿ, ರಾಜು ರದ್ದೇವಾಡಗಿ ಸೇರಿದಂತೆ ಅನೇಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.