ADVERTISEMENT

‘ಬೊಗಸೆಯ ಚಂದಿರ’ ಕೃತಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 5:47 IST
Last Updated 13 ಅಕ್ಟೋಬರ್ 2025, 5:47 IST
ಕಲಬುರಗಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಬೊಗಸೆಯ ಚಂದಿರ’ ಕೃತಿಯನ್ನು ಸಾಹಿತಿ ನೀಲಾಂಬಿಕಾ ಪೊಲೀಸ್‌ ಪಾಟೀಲ ಬಿಡುಗಡೆಗೊಳಿಸಿದರು
ಕಲಬುರಗಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಬೊಗಸೆಯ ಚಂದಿರ’ ಕೃತಿಯನ್ನು ಸಾಹಿತಿ ನೀಲಾಂಬಿಕಾ ಪೊಲೀಸ್‌ ಪಾಟೀಲ ಬಿಡುಗಡೆಗೊಳಿಸಿದರು   

ಕಲಬುರಗಿ: ‘ಜೀವಾನುಭವ ಮತ್ತು ಮನದಾಸೆಯ ಸಾಹಿತ್ಯ ಜೀವನಕ್ಕೆ ಅನನ್ಯವಾಗಿವೆ’ ಎಂದು ಹಿರಿಯ ಸಾಹಿತಿ ನೀಲಾಂಬಿಕಾ ಪೊಲೀಸ್‌ ಪಾಟೀಲ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕವಿ ಮಹಾಲಿಂಗಯ್ಯ ಕೆ.ಸ್ವಾಮಿ ರಚಿತ ‘ಬೊಗಸೆಯ ಚಂದಿರ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಯುವಕರಿಗೆ ಜೀವನ ಮೌಲ್ಯಗಳನ್ನು ಕಟ್ಟಿಕೊಡುವ ಸಾಹಿತ್ಯ ಅವಶ್ಯವಾಗಿದೆ. ಮೊಬೈಲ್ ಸಂಸ್ಕೃತಿ ಕಾಲಘಟ್ಟದಲ್ಲಿ ಪುಸ್ತಕ ಓದುವ ಸಂಸ್ಕೃತಿ ಕಡಿಮೆಯಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ಮುಖ್ಯ ಎಂಜಿನಿಯರ್‌ ಪ್ರೇಮಸಿಂಗ್‌, ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.

ಸಾಹಿತಿ ಭೀಮರಾಯ ಹೇಮನೂರ ಕೃತಿ ಪರಿಚಯಿಸಿದರು. ಮಹಾಲಿಂಗಯ್ಯ ಕೆ.ಸ್ವಾಮಿ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಕಸಾಪ ಜಿಲ್ಲಾ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಶಕುಂತಲಾ ಪಾಟೀಲ, ಜ್ಯೋತಿ ಕೋಟನೂರ ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.