ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮೇ 10ರಂದು ಮಧ್ಯಾಹ್ನ 12.05 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕೆಕೆಆರ್‌ಡಿಬಿ ಕಚೇರಿ ಸಭಾಂಗಣದಲ್ಲಿ ಜರುಗುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5.45 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದರಾಬಾದ್‌ಗೆ ಪ್ರಯಾಣಿಸುವರು.
ಅದೇ ರೀತಿ, ಮೇ 12ರಂದು ಮಧ್ಯಾಹ್ನ 12.05 ಗಂಟೆಗೆ ಬೆಂಗಳೂರಿನಿಂದ ಮರಳಿ ಕಲಬುರಗಿಗೆ ಆಗಮಿಸುವರು. ಅಂದು ಮಧ್ಯಾಹ್ನ 12.45 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ವಲಯದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನೀರನ್ನು ಕಾಯಿಸಿ ಆರಿಸಿ ಕುಡಿಯಲು ಮನವಿ
ಕಲಬುರಗಿ: ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಯಾದ ಭೀಮಾ ನದಿಯಿಂದ ನಿಂತ ನೀರು ಕಲುಷಿತವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಷನ್ ಮಾಡಿ ಪೂರೈಸಲಾಗುತ್ತಿದೆ. ಅದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕು ಎಂದು ಕಲಬುರಗಿ ಕೆಯುಡಬ್ಲ್ಯುಎಸ್‌ಎಂಪಿ–ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
ನೀರಿನ ಸಮಸ್ಯೆಗಳ ಬಗೆಗಿನ ಮಾಹಿತಿಗಾಗಿ ಗ್ರಾಹಕರ ಸೇವಾ ದೂರವಾಣಿ ಸಂಖ್ಯೆ: +91 1800 425 8247 ಹಾಗೂ 084–722–37247 ಸಂಪರ್ಕಿಸಬೇಕು ಎಂದು ಹೇಳಿದ್ದಾರೆ.
ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಂಡಗುರ್ತಿ, ನಾಗಾವಿ ಹಾಗೂ ಅರ್ಜುಣಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಲ್ಲಿ 2025–26ನೇ ಸಾಲಿಗೆ ಪ್ರಥಮ ಪಿಯುಸಿಗೆ (ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ) ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತರು ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು. ಜಿಲ್ಲೆಯ ಕ್ರೈಸ್ ವಸತಿ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳ ಹಂಚಿಕೆ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಗುಂಡಗುರ್ತಿ, ನಾಗಾವಿ ಹಾಗೂ ಅರ್ಜುಣಗಿಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಆಹ್ವಾನ
ಕಲಬುರಗಿ: ಜಿಲ್ಲೆಯ ಅಫಜಲಪುರ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2025–26ನೇ ಶೈಕ್ಷಣಿಕ ಸಾಲಿಗೆ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 2025ರ ಮೇ 9ರ ಸಂಜೆ 5.30 ಗಂಟೆಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯ ಪ್ರಭುದೇವ್ ಎಂ.ಎಸ್.(94493 81159), ಉಪನ್ಯಾಸಕ ಸುರೇಶ ಶಟಗಾರ (98860 12965), ಪ್ರಕಾಶ ರಾಠೋಡ (97394 82027) ಹಾಗೂ ಕುಲಸಚಿವ ವಿಜಯಕುಮಾರ (77956 99557) ಅವರನ್ನು ಸಂಪರ್ಕಿಸಲು ಕಾಲೇಜು ಪ್ರಾಚಾರ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.