ADVERTISEMENT

ಟ್ರೈಲರ್ ಬಿಡುಗಡೆ ನಾಳೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 23:20 IST
Last Updated 30 ಜೂನ್ 2023, 23:20 IST

ಕಲಬುರಗಿ: ‘ಜೈ ಕನ್ನಡಿಗರ ಸೇನೆ ವತಿಯಿಂದ ಜುಲೈ 2 ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿಯ ಕನ್ನಡ ಭವನದಲ್ಲಿ ‘ಬ್ರುಟಲ್‌ಚಲನ’ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ’ ಎಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್‌.ಭಾಸಗಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕ ಅಲ್ಲಮಪ್ರಭು ಪಾಟೀಲ ಅವರು ಟ್ರೈಲರ್ ಬಿಡುಗಡೆ ಮಾಡುವರು. ಶಾಸಕ ಬಸವರಾಜ ಮತ್ತಿಮಡು ಸಮಾರಂಭ ಉದ್ಘಾಟಿಸುವರು. ಶಾಸಕಿ ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಡಾ.ಮೀನಾಕ್ಷಿ ಬಾಳಿ, ಕಸಾಪ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಸೇರಿ ಹಲವರು ಭಾಗವಹಿಸುವರು’ ಎಂದು ಹೇಳಿದರು.

ಈ ಚಿತ್ರವನ್ನು ಸಾಮ್ರಾಟ್ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಕಲಬುರಗಿ, ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ನಟ ಸೇರಿ ಬಹುತೇಕರು ಸ್ಥಳೀಯರು ಎಂದರು.

ADVERTISEMENT

ನಟ ಪ್ರಶಾಂತ್ ಹಾಗೂ ನೂರ್ ಹುಸೇನ್ ಇದ್ದರು.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.