ADVERTISEMENT

ಕಾಂಗ್ರೆಸ್‌ನ ಧರ್ಮ ವಿಭಜನೆ ಆಟ ನಡೆಯದು: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2019, 17:56 IST
Last Updated 17 ಏಪ್ರಿಲ್ 2019, 17:56 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಕಲಬುರ್ಗಿ: ‘2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸ್ವಾರ್ಥ ಸಾಧನೆಗಾಗಿ ಕಾಂಗ್ರೆಸ್ ಪಕ್ಷ ನಡೆಸಿರುವ ಧರ್ಮ ವಿಭಜನೆ ಆಟ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಸಚಿವ ಎಂ.ಬಿ.ಪಾಟೀಲ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರವು ಚರ್ಚೆಗೆ ಗ್ರಾಸವಾಗಿದೆ. ವೀರಶೈವ ಲಿಂಗಾಯತ ಧರ್ಮ ವಿಭಜನೆ ಷಡ್ಯಂತ್ರಕ್ಕೂ ಸಾಕ್ಷಿಯಾಗಿದೆ. ಜನರು ಕಾಂಗ್ರೆಸ್‌ನ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

‘ಎಂ.ಬಿ.ಪಾಟೀಲ ಅವರು ನುಣುಚಿಕೊಳ್ಳುವ ಉದ್ದೇಶದಿಂದ ಪತ್ರ ನಕಲಿಯಾಗಿದೆ, ಬೇಕಿದ್ದರೆ ತನಿಖೆ ನಡೆಸಲಿ ಎಂದು ಹೇಳುತ್ತಿದ್ದಾರೆ. ತನಿಖೆಗೆ ಆಗ್ರಹಿಸುವ ಅವಶ್ಯಕತೆ ಇಲ್ಲ. ತನಿಖೆ ಆಗಿಯೇ ಆಗುತ್ತದೆ. ಆಗ ಅವರ ನಿಜವಾದ ಬಣ್ಣ ಬಯಲಾಗುತ್ತದೆ’ ಎಂದು ಆಕ್ರೋಶದಿಂದ ಹೇಳಿದರು.

ADVERTISEMENT

‘ಸೋನಿಯಾಗಾಂಧಿ ಹುನ್ನಾರವಿಲ್ಲ’
‘ವೀರಶೈವ ಲಿಂಗಾಯತ ಎಂದರೆ ಏನು ಎಂದು ಸೋನಿಯಾಗಾಂಧಿ ಅವರಿಗೆ ಗೊತ್ತಿಲ್ಲ. ಹೀಗಾಗಿ ವೀರಶೈವ ಲಿಂಗಾಯತ ಹೋರಾಟದಲ್ಲಿ ಅವರ ಹುನ್ನಾರವಿಲ್ಲ’ ಎಂದು ಶಾಸಕ ಅಲ್ಲಂ ವೀರಭದ್ರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ವೀರಶೈವ ಲಿಂಗಾಯತ ಅಂದರೆ ಏನು ಎಂದು ನನ್ನನ್ನೇ ಪ್ರಶ್ನಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.