ADVERTISEMENT

ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕಕ್ಕೆ ಜಾರಿದ ಬಸ್: ತಪ್ಪಿದ ದುರಂತ

​ಪ್ರಜಾವಾಣಿ ವಾರ್ತೆ
Published 25 ಜುಲೈ 2022, 5:08 IST
Last Updated 25 ಜುಲೈ 2022, 5:08 IST
   

ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮೊಗಲಾ ಗ್ರಾಮದಿಂದ ಚಿತ್ತಾಪುರಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಇಳಿಜಾರಿಗೆ ಹೋದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಬಸ್ಸಿನಲ್ಲಿ ಅಧಿಕ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳಿದ್ದರು. ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿ ಶರಣು ತೊನಸನಹಳ್ಳಿ ಪ್ರಜಾವಾಣಿಗೆ ತಿಳಿದ್ದಾರೆ.

ಬಸ್ ಓಡಿಸುತ್ತಿರುವಾಗ ಟೈರ್ ರಾಡ್ ಕಟ್ಟಾಗಿ ಬಸ್ ರಸ್ತೆಯ ಪಕ್ಕಕ್ಕೆ ಇಳಿಯಿತು. ಎಷ್ಟೇ ಪ್ರಯತ್ನ ಮಾಡಿದರೂ ನಿಯಂತ್ರಣಕ್ಕೆ ಬರಲಿಲ್ಲ. ಅಷ್ಟೇನೂ ತೆಗ್ಗು ಇಲ್ಲದ ಜಾಗಕ್ಕೆ ಬಸ್ ನಿಂತಿದೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಸ್ ಚಾಲಕ ಪ್ರತಿಕ್ರಿಯಿಸಿದ್ದಾರೆ.
ಬಸ್ ರಸ್ತೆಯ ಕೆಳಗೆ ಇಳಿದಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು, ಕುಟುಂಬದವರು ತೀವ್ರ ಆತಂಕಕ್ಕೊಳಗಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಮಕ್ಕಳ ಸುರಕ್ಷತೆ ಬಗ್ಗೆ ವಿಚಾರಿಸಿದರು.

ADVERTISEMENT

ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತ ಮಾಡಿದ್ದಾರೆ.

ಮೊಗಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.