
ಪ್ರಜಾವಾಣಿ ವಾರ್ತೆ
ಸಿಂಧನೂರು: ಖಾಸಗಿ ಬಸ್‍ವೊಂದು ಗುರುವಾರ ಬೆಳಗಿನ ಜಾವ ನಗರದ ಗಂಗಾವತಿ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬೀದರ್‌ನಿಂದ ಬೆಂಗಳೂರಿಗೆ ಸಿಂಧನೂರು ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ವವಶಾತ್ ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್‍ನ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.