ಕಲಬುರಗಿ: ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ಜೇವರ್ಗಿ ಶಾಸಕ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಬಹುದು. ಅದನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಎಐಸಿಸಿ ಅಧ್ಯಕ್ಷರು ತೀರ್ಮಾನಿಸುತ್ತಾರೆ. ಕೆಲವರು ಎಐಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಿಗೆ ಆಪ್ತರಿರುತ್ತಾರೆ. ಅವರಿಗೆ ತಮ್ಮ ಬೇಡಿಕೆ ಸಲ್ಲಿಸಿರಬಹುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.