ADVERTISEMENT

ಎಂಟು ಒಂಟೆಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 7:06 IST
Last Updated 21 ಜುಲೈ 2020, 7:06 IST
ಕಲಬುರ್ಗಿಯ ಆಳಂದ ಪಟ್ಟಣದಲ್ಲಿ ತಹಶೀಲ್ದಾರ್ ಹಾಗೂ ಪೊಲೀಸರು ಒಂಟೆಗಳನ್ನು ರಕ್ಷಿಸಿರುವುದು
ಕಲಬುರ್ಗಿಯ ಆಳಂದ ಪಟ್ಟಣದಲ್ಲಿ ತಹಶೀಲ್ದಾರ್ ಹಾಗೂ ಪೊಲೀಸರು ಒಂಟೆಗಳನ್ನು ರಕ್ಷಿಸಿರುವುದು   

ಕಲಬುರ್ಗಿ: ಮಧ್ಯಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಎಂಟು ಒಂಟೆಗಳನ್ನು ಸೋಮವಾರ ಆಳಂದ ತಹಶೀಲ್ದಾರ್‌ ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟಾರೆ 25ಕ್ಕೂ ಅಧಿಕ ಒಂಟೆಗಳನ್ನು ಮಧ್ಯಪ್ರದೇಶದಿಂದ ಕಾಲ್ನಡಿಗೆಯಲ್ಲಿ ಕರೆತರಲಾಗಿದ್ದು, ಅವುಗಳನ್ನು ಮಾಂಸಾಹಾರಕ್ಕಾಗಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು ಎಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ ಮೋಟಗಿ ಹಾಗೂ ಸುನಿಲ್‌ ದುಗರ್‌ ತಿಳಿಸಿದ್ದಾರೆ.

ಉಳಿದ ಒಂಟೆಗಳಿಗಾಗಿ ಶೋಧ ಕಾರ್ಯ ನಡೆದಿದೆ. ಮೇಲಿಂದ ಮೇಲೆ ಮಾಂಸಕ್ಕಾಗಿ ಒಂಟೆಗಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದ್ದು, ಪೊಲೀಸ್‌ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಒಂಟೆಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.