ADVERTISEMENT

ಶರಣಬಸವ ವಿ.ವಿ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 3:28 IST
Last Updated 26 ಸೆಪ್ಟೆಂಬರ್ 2021, 3:28 IST

ಕಲಬುರ್ಗಿ: ದೇಶದ ಪ್ರಮುಖ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಕಂಪನಿಗಳು ನಡೆಸಿದ ಕ್ಯಾಂಪಸ್ ಸಂದರ್ಶನಗಳಲ್ಲಿಇಲ್ಲಿನ ಶರಣಬಸವ ವಿಶ್ವವಿದ್ಯಾಲಯದ ಎಂಜಿನಿಯರಿಂಗ್‌ನ ಮತ್ತೆ 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಎಂಫಾಸಿಸ್‌ನ ಕ್ಯಾಂಪಸ್ ಸಂದರ್ಶನದಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಹಾಯಕ ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿ ₹ 3.25 ಲಕ್ಷ ವಾರ್ಷಿಕ ಪ್ಯಾಕೇಜ್‌ನೊಂದಿಗೆ ಆಯ್ಕೆಯಾಗಿದ್ದಾರೆ. ಇನ್ಫೊಸಿಸ್, ವಿಪ್ರೊ, ಅಕ್ಸೆಂಚರ್, ಕ್ಯಾಪ್‌ಜೆಮಿನಿ, ಡಿಎಕ್ಸಿ, ಟಿಸಿಎಸ್ ಮತ್ತು ಇತರ ಕಂಪನಿಗಳು ನಡೆಸಿದ ಕ್ಯಾಂಪಸ್ ಸಂದರ್ಶನಗಳಲ್ಲಿ ಇದೂವರೆಗೆ 743 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಶರಣಬಸವ ವಿಶ್ವವಿದ್ಯಾಲಯದ ಉದ್ಯೋಗ
ಅಧಿಕಾರಿ ಪ್ರೊ.ಶಿವಕುಮಾರ ಕಾಗಿ ಅವರು
ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಡಾ.ದಾಕ್ಷಾಯಿಣಿ ಅವ್ವ ಅವರು ಅಭಿನಂದಿಸಿದರು.

ADVERTISEMENT

ವಿ.ವಿ ಕುಲಪತಿ ಡಾ.ನಿರಂಜನ್ ವಿ. ನಿಷ್ಠಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಸಮಕುಲಪತಿಗಳಾದ ಪ್ರೊ.ವಿ.ಡಿ.ಮೈತ್ರಿ, ಎನ್.ಎಸ್.ದೇವರಕಲ್, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ.ಬಸವರಾಜ ಮಠಪತಿ, ಡೀನ್ ಡಾ.ಲಕ್ಷ್ಮಿ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಪ್ರೊ.ಕಿರಣ್ ಮಾಕಾ ಅವರು ವಿದ್ಯಾರ್ಥಿಗಳ ಈ ಸಾಧನೆಗಾಗಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.