ADVERTISEMENT

ಹಲ್ಲೆ; 14 ಜನರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 5:00 IST
Last Updated 15 ಏಪ್ರಿಲ್ 2021, 5:00 IST

ಚಿಂಚೋಳಿ: ತಾಲ್ಲೂಕಿನ ಫರ್ದಾರ ಮೋತಕಪಳ್ಳಿ ಗ್ರಾಮದಲ್ಲಿ ಮಾಟ ಮಂತ್ರ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬದ ಸದಸ್ಯರನ್ನು ಕಂಬಕ್ಕೆ ಕಟ್ಟಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರ ವಿರುದ್ಧ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಟ ಮಂತ್ರ, ಬಾನಾಮತಿ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿ ರಾತ್ರಿ ಮನೆಗೆ ನುಗ್ಗಿದ್ದ ಆರೋಪಿಗಳು ಕುಟುಂಬವೊಂದರ ಸದಸ್ಯರನ್ನು ಮನೆಯಿಂದ ಎಳೆದು ತಂದು ಕಂಬಕ್ಕೆ ಕಟ್ಟಿ ಥಳಿಸಿದ್ದರು. ಇದರ ವಿರುದ್ಧ ಹಲ್ಲೆಗೊಳಗಾದವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 2ರಂದು ಘಟನೆ ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.