ಗುರುಮಠಕಲ್: ತಾಲ್ಲೂಕಿನ ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಮೇಲೆ ಕಾಕಲವಾರ ಪಂಚಾಯಿತಿ ಪಿಡಿಒ ಮಲ್ಲಾರೆಡ್ಡಿ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪಂವಾರ್ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನೀಡಿದ ವರದಿಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗ್ರಾಮದ 3 ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಅವುಗಳಿಂದ ನೀರು ಸರಬರಾಜು ಮಾಡದಂತೆ ಮತ್ತು ಸೋರಿಕೆಯ ಪೈಪ್‌ಲೈನ್ ದುರಸ್ತಿಗೆ ಸೂಚಿಸಿದರೂ ಕ್ರಮವಹಿಸದಿರುವುದು,
ಜಿಲ್ಲಾ ಪಂಚಾಯಿತಿಯಿಂದ ಗ್ರಾಮಗಳಲ್ಲಿ ಚರಂಡಿ ಸೇರಿದಂತೆ ಸ್ವಚ್ಛತೆಗೆ ಕ್ರಮವಹಿಸಲು ಸೂಚಿಸಿದರೂ ನಿರ್ಲಕ್ಷ್ಯಿಸಿದ್ದು ಹಾಗೂ ಗ್ರಾಮದಲ್ಲಿ ಅಗತ್ಯ ಜಾಗೃತಿ ಮೂಡಿಸದೇ ಕರ್ತವ್ಯ ಲೋಪ ಎಸಗಿದ ಹಿನ್ನಲೆ ಪಿಡಿಒ ಮಲ್ಲಾರೆಡ್ಡಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.