ಕಲಬುರಗಿ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ಪ್ರದೇಶದ ಬಜಾರ್‌ಪೇಟ್ ಪೊಲೀಸ್ ಠಾಣೆಯಲ್ಲಿ ಜೂನ್ 22ರಂದು ದಾಖಲಾಗಿರುವ ನಿಷೇಧಿತ ಕೆಮ್ಮಿನ ಸಿರಪ್ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಆಗ್ರಹಿಸಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
‘ಕಲ್ಯಾಣ ಪ್ರದೇಶದಲ್ಲಿ ₹27 ಸಾವಿರ ಮೌಲ್ಯದ ನಿಷೇಧಿತ ಕೆಮ್ಮಿನ ಸಿರಪ್‌ನ 120 ಬಾಟಲ್ ಸಾಗಣೆ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ಲಿಂಗರಾಜ ಕಣ್ಣಿ ಅವರ ಬಂಧನವಾಗಿತ್ತು. ಬಂಧನದ ನಂತರ ಕಣ್ಣಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಇದೇ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಲಿ, ಸಿಬಿಐ ತನಿಖೆಯೂ ಆಗಲಿ, ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ನಾನು ಹೇಳಿದ್ದೆ. ಅದರಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೀಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿರುವೆ. ನಮ್ಮ ರಾಜ್ಯ ಸರ್ಕಾರಕ್ಕೂ ಪತ್ರ ಬರೆದು ಪ್ರಕರಣವನ್ನು ಗಮನಕ್ಕೆ ತಂದಿದ್ದೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.