ADVERTISEMENT

ಕೇಂದ್ರ ಬಜೆಟ್: ಮಹಿಳೆಯರಿಗೆ ವಂಚನೆ: ಡಾ.ಮೀನಾಕ್ಷಿ ಬಾಳಿ ಆರೋಪ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 5:37 IST
Last Updated 3 ಫೆಬ್ರುವರಿ 2023, 5:37 IST
ಮೀನಾಕ್ಷಿ ಬಾಳಿ
ಮೀನಾಕ್ಷಿ ಬಾಳಿ   

ಕಲಬುರಗಿ: ‘ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಂಡವಾಳಶಾಹಿಗಳನ್ನು ಪ್ರೋತ್ಸಾಹಿಸುವ ಬಜೆಟ್ ಆಗಿದ್ದು, ಮಹಿಳೆಯರು ಮತ್ತು ದುಡಿಯುವ ಜನರ ಕಣ್ಣಿಗೆ ಮಣ್ಣೆರಚಿದೆ’ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ಡಾ.ಮೀನಾಕ್ಷಿ ಬಾಳಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಹಸಿ ಸುಳ್ಳುಗಳನ್ನು ಪೋಣಿಸಿ ಎಲ್ಲವೂ ಬಹಳ ಉತ್ತಮವಾಗಿದೆ ಎಂಬ ಅಭಿಪ್ರಾಯ ಹರಿಬಿಟ್ಟಿದೆ. ವಾಸ್ತವಾಂಶ ಬೇರೆಯೇ ಇದೆ. ಬಹುತೇಕ ಬಡ ಮತ್ತು ಮಧ್ಯಮ ಕುಟುಂಬಗಳು ಹಾಗೂ ಎಲ್ಲ ಸ್ಥರದ ಮಹಿಳೆಯರು ನಿರುದ್ಯೋಗವೂ ಸೇರಿದಂತೆ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಹೊತ್ತಿನಲ್ಲಿ ಬಜೆಟ್ ಈ ವಾಸ್ತವಾಂಶವನ್ನು ಮರೆತಿದೆ’ ಎಂದಿದ್ದಾರೆ.

‘ಮಹಿಳೆಯರ ಉಳಿತಾಯಗಳು ಬಹುತೇಕ ಖಾಸಗಿ ಸಂಸ್ಥೆಗಳ ಪಾಲಾಗುತ್ತವೆ. ಮೋದಿ ಸರ್ಕಾರದ ನೀತಿಗಳ ಭಾಗವಾಗಿ ಅದು ಹಣಕಾಸು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗುತ್ತದೆ. ಉದ್ಯೋಗಾವಕಾಶ ಒದಗಿಸುವ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಶೇ 33 ಕಡಿತ ಮಾಡಲಾಗಿದೆ. ನಿಜವೆಂದರೆ ಇಂತಹ ಕಡಿತಗಳು ಮಹಿಳಾ ಉದ್ದೇಶಿತ ಯೋಜನೆಗಳ ಮೇಲಿನ ನೇರ‌ ದಾಳಿಯಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT