ADVERTISEMENT

ಆಳಂದದಲ್ಲಿರುವ ಕೇಂದ್ರೀಯ ವಿವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:36 IST
Last Updated 19 ಡಿಸೆಂಬರ್ 2025, 5:36 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಕಲಬುರಗಿ: ‘ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳಿಗೆ (ಬಿಇಡಿ ಸೇರಿದಂತೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಮೂಲಕ ವಿವಿಯ 35 ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಡಿಸೆಂಬರ್‌ 14ರಿಂದಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಜನವರಿ 14ರವರೆಗೆ ಅವಕಾಶವಿರಲಿದೆ. ಪ್ರವೇಶ ಪ್ರಕ್ರಿಯೆಯು ಸಂಪೂರ್ಣ ಆನ್‌ಲೈನ್‌ ಮೂಲಕ ನಡೆಯುತ್ತದೆ. ಅರ್ಜಿ https://exams.nta.nic.in/cuet-pg/ ಮೂಲಕ ಸಲ್ಲಿಸಬಹುದು. ಪದವಿ ಅಂತಿಮ ಸೆಮಿಸ್ಟರ್‌ನಲ್ಲಿ ಓದುತ್ತಿರುವವರೂ ಅರ್ಜಿ ಸಲ್ಲಿಸಬಹುದಾಗಿದೆ’ ಎಂದು ತಿಳಿಸಿದರು.

ADVERTISEMENT

‘2026ರ ಮಾರ್ಚ್‌ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕಂಪ್ಯೂಟರ್‌ ಆಧಾರಿತವಾಗಿರಲಿದೆ.   ಭಾರತದ 16 ನಗರಗಳು ಸೇರಿದಂತೆ 292 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಕಲಬುರಗಿ ಮತ್ತು ಬಳ್ಳಾರಿ, ರಾಜ್ಯದ ಇತರೆಡೆ ಬೆಳಗಾವಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರಗಳು ಇರಲಿವೆ’ ಎಂದು ಅವರು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ www.cuk.ac.in ವೆಬ್‌ಸೈಟ್‌ ದೂ.011–40759000, 011–69227700 ಸಂಪರ್ಕಿಸಬಹುದು ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.