ADVERTISEMENT

ಕಲಬುರಗಿ: ಎರಡನೇ ದಿನದ ಸಿಇಟಿ ಪರೀಕ್ಷೆಯೂ ಸುಸೂತ್ರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 16:25 IST
Last Updated 17 ಏಪ್ರಿಲ್ 2025, 16:25 IST
ಕಲಬುರಗಿಯ ವಿಜಯ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಸಿಬ್ಬಂದಿ ತಪಾಸಣೆ ನಡೆಸಿದರು
ಪ್ರಜಾವಾಣಿ ಚಿತ್ರ
ಕಲಬುರಗಿಯ ವಿಜಯ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಸಿಬ್ಬಂದಿ ತಪಾಸಣೆ ನಡೆಸಿದರು ಪ್ರಜಾವಾಣಿ ಚಿತ್ರ   

ಕಲಬುರಗಿ: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಎರಡನೇ ದಿನವಾದ ಗುರುವಾರವೂ ಸುಸೂತ್ರವಾಗಿ ನಡೆಯಿತು.

ನಗರದ 36 ಪರೀಕ್ಷಾ ಕೇಂದ್ರಗಳಲ್ಲಿ 14500 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಬೆಳಿಗ್ಗೆ 10.30ರಿಂದ 11.50 ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದರು.

14,214 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 286 ವಿದ್ಯಾರ್ಥಿಗಳು ಗೈರಾದರು ಎಂದು ಡಿಡಿಪಿಯು ಅಶೋಕ ಶಾಸ್ತ್ರಿ ಮಾಹಿತಿ ನೀಡಿದರು.

ADVERTISEMENT

ನಗರದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಮೆರಾ ಹಾಗೂ ಫೇಸ್‌ ರಿಕಗ್ನಿಶನ್ ತಂತ್ರಜ್ಞಾನವನ್ನು ಅಳವಡಿಸಿ ವಿದ್ಯಾರ್ಥಿಗಳ ನೈಜತೆಯನ್ನು ಖಚಿತಪಡಿಸಿಕೊಳ್ಳಲಾಯಿತು ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.