ADVERTISEMENT

ಸಂತೆ ಸ್ಥಳಾಂತರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 12:58 IST
Last Updated 5 ಡಿಸೆಂಬರ್ 2019, 12:58 IST
ಅಫಜಲಪುರ ಪಟ್ಟಣದ ವಾರದ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವಂತೆ ಜಾತ್ಯತೀತ ಜನತಾದಳದ ಮುಖಂಡರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು
ಅಫಜಲಪುರ ಪಟ್ಟಣದ ವಾರದ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವಂತೆ ಜಾತ್ಯತೀತ ಜನತಾದಳದ ಮುಖಂಡರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು   

ಅಫಜಲಪುರ: ಪಟ್ಟಣದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆ ಕಟ್ಟೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಬೇಕು ಎಂದು ತಾಲ್ಲೂಕು ಜೆಡಿಎಸ್ ಮುಖಂಡರು ಈಚೆಗೆ ಇಲ್ಲಿನ ಪುರಸಭೆ ಕಾರ್ಯಾಲಯದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದರು.

ನೇತೃತ್ವ ವಹಿಸಿದ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಬಡದಾಳ ಮಾತನಾಡಿ, ‘ಅನೇಕ ವರ್ಷಗಳಿಂದ ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದರು.

ಪುರಸಭೆಯ ಆಡಳಿತಾಧಿಕಾರಿಯೂ ಆಗಿರುವ ವಿಭಾಗಾಧಿಕಾರಿ ರಾಮಚಂದ್ರ ಗಡದೆ ಅವರು ಪ್ರತಿಭಟನಕಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಶೀಘ್ರ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದಾಗ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದರು.

ADVERTISEMENT

‘ಸಂತೆ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ಈ ಕುರಿತು ಅಫಜಲಪುರ ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಶೀಘ್ರದಲ್ಲೇ ಅಧಿಕಾರಿಗಳ ಮತ್ತು ಸಾರ್ವಜನಿಕ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಗಡದೆ ತಿಳಿಸಿದರು.

ಮುಖಂಡರಾದ ಸುನೀಲ ಹೊಸಮನಿ, ಹಣಮಂತ ಬಿರಾದಾರ, ಸಾಗರ ರಾಠೋಡ, ಮಂಜುನಾಥ ಪಟ್ಟೇದಾರ, ಜಾವೀದ ಮನಿಯಾರ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.