ADVERTISEMENT

ಕಲಬುರಗಿ | ಸರ್ಕಾರಿ ನೌಕರಿ ಆಮಿಷ: ₹ 6 ಲಕ್ಷ ಪಡೆದು ವಂಚನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 4:09 IST
Last Updated 21 ಫೆಬ್ರುವರಿ 2025, 4:09 IST
<div class="paragraphs"><p>&nbsp;ವಂಚನೆ–ಪ್ರಾತಿನಿಧಿಕ ಚಿತ್ರ</p></div>

 ವಂಚನೆ–ಪ್ರಾತಿನಿಧಿಕ ಚಿತ್ರ

   

ಕಲಬುರಗಿ: ನೀರಾವರಿ ಇಲಾಖೆಯಲ್ಲಿ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಳಂದ ತಾಲ್ಲೂಕಿನ ಇಕ್ಕಳಕಿ ಗ್ರಾಮದ ನಿವಾಸಿ, ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡಿತ್ತಿದ್ದ ಅಶೋಕ ಹಣಮಂತರಾಯ ನೀಡಿದ ದೂರಿನ ಅನ್ವಯ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ನಾಗರಾಳ ನಿವಾಸಿ ಸಿಕಂದರ್ ಬಾಸಗಿ ವಿರುದ್ಧ ಐಪಿಸಿ ಸೆಕ್ಷನ್ 420, 406 ಅಡಿ ಪ್ರಕರಣ ದಾಖಲಾಗಿದೆ.

ADVERTISEMENT

ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶೋಕ ಅವರಿಗೆ ಸಿಕಂದರ್ ಪರಿಚಯವಾಗಿದ್ದು, ಆಗಾಗ ಚಹಾ ಕುಡಿದು ಮಾತಾಡುತ್ತಿದ್ದರು. ಅಶೋಕನ ವಿದ್ಯಾಭ್ಯಾಸ ವಿಚಾರಿಸಿದ ಸಿಕಂದರ್, ನೀರಾವರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ‘ಡಿ’ ಗ್ರೂಪ್ ನೌಕರಿ ಕೊಡಿಸುವುದಾಗಿ ನಂಬಿಸಿದ. ನೌಕರಿಗಾಗಿ ₹ 8 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡು, ₹ 6 ಲಕ್ಷ ಮುಂಗಡವಾಗಿ ಪಡೆದಿದ್ದ. ಎರಡು ವರ್ಷಗಳಾದರೂ ನೌಕರಿ ಕೊಡಿಸದೆ, ಹಣವೂ ಮರಳಿಸದೆ ವಂಚಿಸಿದ್ದಾನೆ ಎಂದು ಆರೋಪಿಸಿ ಅಶೋಕ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.