
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ಚಿಂಚೋಳಿ (ಕಲಬುರಗಿ ಜಿಲ್ಲೆ): ಕಲ್ಲುಗಣಿ ಕಾರ್ಮಿಕರ ಅಪ್ರಾಪ್ತ ಮಗಳ ಮೇಲೆ ಮಾಲೀಕನ ಮಗ ನಿರಂತರ ಅತ್ಯಾಚಾರ ಎಸಗಿದ್ದು, ಆರೋಪಿ ಮಿರಿಯಾಣ ಗ್ರಾಮದ ಸದ್ದಾಂ ಅಲಿಯಾಸ್ ಇಮ್ರಾನ್ (33) ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.
‘15 ವರ್ಷದ ಸಂತ್ರಸ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮೇಲೆ ಈ ಹಿಂದೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಆ ಮಹಿಳೆ ಈಗಲೂ ಇವನ ಅಧೀನದಲ್ಲಿಯೇ ಇದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿರಿಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.