
ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.
ಬಸ್‌ನಿಲ್ದಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿತ್ತು. ನೀರು ಖರೀದಿಸಿ ಕುಡಿಯುವಂತಾಗಿತ್ತು. ಚಾಲಕರು, ನಿರ್ವಾಹಕರು, ಪ್ರಯಾಣಿಕರು ಮುಖ ತೊಳೆದುಕೊಳ್ಳುವುದಕ್ಕೂ ನೀರಿರಲಿಲ್ಲ.
ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ’ ಎಂದು ಡಿಸೆಂಬರ್ 3ರಂದು ವರದಿ ಪ್ರಕಟಿಸಲಾಗಿತ್ತು. ಎಚ್ಚೆತ್ತುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹೊಸದಾಗಿ ಕೊಳವೆ ಬಾವಿ ಕೊರೆಯಿಸಿ, ಮೋಟಾರ್ ಅಳವಡಿಸಿ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ.
ನಿಯಂತ್ರಕರ ಕೊಠಡಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಶುದ್ಧಿಕರಿಸಿದ ನೀರು ಪ್ರಯಾಣಿಕರಿಗೆ ಕುಡಿಯಲು ನೀರಿನ ತೊಟ್ಟಿಯ ಪಕ್ಕದಲ್ಲಿಯೇ ಟೇಬಲ್ ಹಾಕಿ ಎರಡು ಡ್ರಮ್ ಇಡಲಾಗಿದೆ. ನಿತ್ಯ 10 ಡ್ರಮ್ ನೀರು ಖಾಲಿಯಾಗುತ್ತಿದೆ ಎಂದು ಬಸ್ ಘಟಕದ ವ್ಯವಸ್ಥಾಪಕ ಸುರೇಶ ತೆಗಲತಿಪ್ಪಿ ತಿಳಿಸಿದ್ದಾರೆ.