ADVERTISEMENT

ಚಿಂಚೋಳಿ: ಮಾಸ್ಕ್ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 6:57 IST
Last Updated 21 ಜನವರಿ 2022, 6:57 IST
ಚಿಂಚೋಳಿಯಲ್ಲಿ ಮಾಸ್ಕ್ ಜಾಗೃತಿ ಅಭಿಯಾನ ನಡೆಯಿತು
ಚಿಂಚೋಳಿಯಲ್ಲಿ ಮಾಸ್ಕ್ ಜಾಗೃತಿ ಅಭಿಯಾನ ನಡೆಯಿತು   

ಚಿಂಚೋಳಿ: ಕೋವಿಡ್ ಹರಡುವಿಕೆ ನಿಯಂತ್ರಿಸಲು ತಾಲ್ಲೂಕು ಆಡಳಿತವು ಬುಧವಾರ ಪಟ್ಟಣದಲ್ಲಿ ಮಾಸ್ಕ್ ಜಾಗೃತಿ ಅಭಿಯಾನ‌ ಕೈಗೊಂಡು ಜನರಲ್ಲಿ ಅರಿವು ಮೂಡಿಸಲಾಯಿತುತು.

ಜಾಥಾ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ, ‘ಜನರು ಮಾಸ್ಕ್‌ ಧರಿಸಬೇಕಾದದ್ದು ತುಂಬಾ ಮುಖ್ಯ. ಆರೋಗ್ಯ ರಕ್ಷಣೆಗೆ ಅಗತ್ಯ’ ಎಂದು ತಿಳಿಸಿದರು.

ತಹಶಿಲ್ದಾರ್ ಅಂಜುಮ ತಬಸ್ಸುಮ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಿಲ ರಾಠೋಡ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹಮದ್ ಗಫಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಪಾಲಾಮೂರ, ಶಾಂತವೀರ ಮಠಪತಿ, ಸಬ್ ಇನ್‌ಸ್ಪೆಕ್ಟರ್ ಹಣಮಂತ, ಆದರ್ಶ ವಿದ್ಯಾಲಯ ಪ್ರಾಂಶುಪಾಲ ನಾಗಶೆಟ್ಟಿ ಭದ್ರಶೆಟ್ಟಿ, ದೇವಿದಾಸ ರಾಠೋಡ, ಗುಂಡಪ್ಪ ಬಿರಾಪುರ ಪಾಲ್ಗೊಂಡಿದ್ದರು.

ADVERTISEMENT

ಕೋವಿಡ್ ಪರೀಕ್ಷೆಗೆ ಜನರ ಹಿಂಜರಿಕೆ: ಕೋವಿಡ್ ಹೆಚ್ಚಾಗುತ್ತಿದ್ದರೂ ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬಹುತೇಕ ಮಂದಿ ನೆಗಡಿಯಂತಹ ಲಕ್ಷಣಗಳಿಂದ ಬಳಲುತ್ತಿದ್ದರೂ ಮಾತ್ರೆ ಸೇವಿಸಿ ಮನೆಯಲ್ಲಿ ಉಪಚಾರ ಮಾಡಿಸಿಕೊಳ್ಳುತ್ತಿದ್ದಾರೆ. ಕೋವಿಡ್ ಪರೀಕ್ಷಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂದು ತಾಲ್ಲೂಕು ಆಸ್ಪತ್ರೆಯ ಮೂಲಗಳು ತಿಳಿಸಿವೆ. 15 ದಿನಗಳಲ್ಲಿ ಹಗಲು ಮತ್ತು ರಾತ್ರಿ ಹೊರ ರೋಗಿ ವಿಭಾಗದಲ್ಲಿ ಜನ ಹೆಚ್ಚಿನ ಪ್ರಮಾಣದಲ್ಲಿ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಹಗಲಿನಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸುವರು ಎಂದು ಕೆಲವರು ರಾತ್ರಿ ಬರುತ್ತಾರೆ. ನಾವು ರಾತ್ರಿ ಕೂಡ ವೈದ್ಯರ ಸಲಹೆಯಂತೆ ಆರ್‌ಎಟಿ ಪರೀಕ್ಷೆ ನಡೆಸಲು ಕ್ರಮ ಕೈಗೊಂಡಿದ್ದೇವೆ’ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತ
ಮುಖ್ಯ ವೈದ್ಯಾಧಿಕಾರಿ ಡಾ. ಸಂತೋಷ ಪಾಟೀಲ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.