ADVERTISEMENT

ಚಿತ್ತಾಪುರ | ಬಿಜೆಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ತೇಜೋವಧೆ: ಆರೋಪ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 5:10 IST
Last Updated 27 ಅಕ್ಟೋಬರ್ 2025, 5:10 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಚಿತ್ತಾಪುರ: ‘ಕಳೆದೆರಡು ವಾರಗಳಿಂದ ಆರ್‌ಎಸ್‌ಎಸ್ ಪಥ ಸಂಚಲನ ಸಂಬಂಧ ಬಿಜೆಪಿ ನಾಯಕರು ನಿರಂತರವಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅವರ ತೇಜೋವಧೆಯಲ್ಲಿ ತೊಡಗಿದ್ದಾರೆ’ ಎಂದು ಕಾಂಗ್ರೆಸ್ ಯುವ ಮುಖಂಡ ಆನಂದಗೌಡ ಪಾಟೀಲ ಸಂಕನೂರು ಆರೋಪಿಸಿದರು.

‘ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸಂಘವೆಂದು ಹೇಳಿಕೊಳ್ಳುವ ಆರ್‌ಎಸ್‌ಎಸ್, ಬಿಜೆಪಿ ಮುಖಂಡರು ಸಂಘದ ನೋಂದಣಿ ದಾಖಲೆ ಬಿಡುಗಡೆ ಮಾಡದೆ ವ್ಯರ್ಥ ಟೀಕೆಯಲ್ಲಿ ನಿರತರಾಗಿದ್ದಾರೆ. ಸಂಘ ಪರಿವಾರದವರಿಗೆ ಕಾನೂನು ಪಾಲಿಸಿ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಸುಳ್ಳು ಆರೋಪದಲ್ಲಿ ತೊಡಗಿದ್ದಾರೆ’ ಎಂದರು.

ADVERTISEMENT

‘ಪಥ ಸಂಚಲನ ಮಾಡಲು ಅವಕಾಶ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ಆರ್‌ಎಸ್‌ಎಸ್ ಸಂಘವು ಅದ್ಯಾವ ನೈತಿಕತೆ ಇಟ್ಟುಕೊಂಡಿದೆ. ಸಂವಿಧಾನದಲ್ಲಿ ವಿಶ್ವಾಸವಿಲ್ಲದ ಆರ್‌ಎಸ್‌ಎಸ್ ಸಂಘವು ಸಂವಿಧಾನದಡಿಯಲ್ಲಿ ಸ್ಥಾಪಿತವಾದ ನ್ಯಾಯಾಲಯದಲ್ಲಿ ನ್ಯಾಯ ಕೇಳುವುದು ಒಂದು ಹಾಸ್ಯಾಸ್ಪದ ಸಂಗತಿ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.