ಚಿತ್ತಾಪುರ: ಪಟ್ಟಣದಲ್ಲಿ 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಕುರಿತು ಪೋಕ್ಸೊ ಕಾಯ್ದೆಯಡಿ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
16 ವರ್ಷದ ಬಾಲಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಘಟನೆ ನಡೆದಿರುವ ಸ್ಥಳವನ್ನು ಪೊಲೀಸರು ಮಹಜರು ಮಾಡಿದ್ದಾರೆ. ನಂತರ ಸ್ಥಳೀಯ ಆಸ್ಪತ್ರೆಯಲ್ಲಿ ಹುಡುಗನನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಸಂಜೆ ನ್ಯಾಯಾಲಯವು ಹುಡುಗನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
‘ಶಹಾಬಾದ್ ರಸ್ತೆಯಲ್ಲಿರುವ ಪಟ್ಟಣದ ಹಳೆಯ ಕಟ್ಟಡದ ಆವರಣದೊಳಗೆ ಆ.26ರಂದು ರಾತ್ರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ಬಾಲಕ ಬಳಿಕ ತಾಯಿಗೆ ವಿಷಯ ತಿಳಿಸಿದ್ದಾನೆ. ಬಾಲಕನ ತಾಯಿ ಆ.27ರಂದು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.