ADVERTISEMENT

Video: ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 4:42 IST
Last Updated 17 ಸೆಪ್ಟೆಂಬರ್ 2022, 4:42 IST
ಕಲಬುರಗಿ ನಗರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಕಪ್ಪ ಬಟ್ಟೆ ಪ್ರದರ್ಶಿಸಿದವರನ್ನು ವಶಕ್ಕೆ ಪಡೆದ ಪೊಲೀಸರು
ಕಲಬುರಗಿ ನಗರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಕಪ್ಪ ಬಟ್ಟೆ ಪ್ರದರ್ಶಿಸಿದವರನ್ನು ವಶಕ್ಕೆ ಪಡೆದ ಪೊಲೀಸರು   

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಎಸ್‌ವಿಪಿ ವೃತ್ತದಲ್ಲಿನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದರು.

ಕೋಲಿ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದ ಮುಖ್ಯಮಂತ್ರಿಗೆ ಧಿಕ್ಕಾರ, ಮಾತು ತಪ್ಪಿದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಪೊಲೀಸರು ವಶಕ್ಕೆ ಪಡೆದು, ಅಲ್ಲಿಂದ ಕರೆದೊಯ್ದರು.

ತಳವಾರ ಎಸ್‌ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸರ್ದಾರ್ ರಾಯಪ್ಪ ಸೇರಿದಂತೆ ಇತರರನ್ನು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.