ADVERTISEMENT

‘20ರಂದು ಮುಖ್ಯಮಂತ್ರಿ ಮನೆ ಎದುರು ಧರಣಿ’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 2:46 IST
Last Updated 17 ಸೆಪ್ಟೆಂಬರ್ 2021, 2:46 IST
ಪ್ರಭುದೇವ ಯಳಸಂಗಿ
ಪ್ರಭುದೇವ ಯಳಸಂಗಿ   

ಕಲಬುರ್ಗಿ: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ಸೆ.20ರಂದು ಮುಖ್ಯಮಂತ್ರಿ ಅವರ ಮನೆಯ ಎದುರು ಧರಣಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್‌ ಸೋಂಕಿನಿಂದ ಮೃತಪಟ್ಟ ಕಾರ್ಮಿಕರಿಗೆ ₹ 20 ಲಕ್ಷ ಪರಿಹಾರ ಇನ್ನೂ ಬಂದಿಲ್ಲ. ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ 21 ಲಕ್ಷ ಕಳಪೆ ಪಡಿತರ ಕಿಟ್ ನೀಡಿದ್ದಾರೆ. ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುವುದನ್ನು ತಪ್ಪಿಸಿ ಅಧಿಕಾರಿಗಳು ಇಲಾಖೆಯ ಹಣ ಲೂಟಿ ಮಾಡುತ್ತಿದ್ದಾರೆ. ಮಂಡಳಿಯಿಂದ ಬಂದಿರುವ ಆಹಾರ ಕಿಟ್‌ಗಳನ್ನು ಹಂಚಿಕೆ ಮಾಡದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಮನೆ ಎದುರು ನಡೆಯಲಿರುವ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿಯಲ್ಲಿ ಕಲಬುರ್ಗಿಯಿಂದ 500 ಜನ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಹಿತಿ
ನೀಡಿದರು.

ADVERTISEMENT

ನಾಗಯ್ಯ ಸ್ವಾಮಿ, ಶಂಕರ ಕಟ್ಟಿಸಂಗಾವಿ, ರಾಘವೇಂದ್ರ ಎಂ.ಜಿ. ಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.