ADVERTISEMENT

ಜ.12 ರಂದು ಚಿತ್ತಾಪುರಕ್ಕೆ ಮುಖ್ಯಮಂತ್ರಿ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 5:15 IST
Last Updated 8 ಜನವರಿ 2026, 5:15 IST
ಚಿತ್ತಾಪುರ ಪಟ್ಟಣದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಸ್ಥಳವನ್ನು ಅಧಿಕಾರಿಗಳು ಬುಧವಾರ ಪರಿಶೀಲನೆ ಮಾಡಿದರು
ಚಿತ್ತಾಪುರ ಪಟ್ಟಣದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಸ್ಥಳವನ್ನು ಅಧಿಕಾರಿಗಳು ಬುಧವಾರ ಪರಿಶೀಲನೆ ಮಾಡಿದರು   

ಚಿತ್ತಾಪುರ: ಚಿತ್ತಾಪುರ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜ.12 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಬುಧವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಕಾರ್ಯಕ್ರಮ ಆಯೋಜನೆ ಮಾಡಲು ಉದ್ದೇಶಿಸಿರುವ ಪಟ್ಟಣದ ಕಡೆಚೂರು ಮೈದಾನ ಪರಿಶೀಲನೆ ಮಾಡಿದರು. ವೇದಿಕೆ ನಿರ್ಮಾಣ, ಶಾಮಿಯಾನಾ, ಪೊಲೀಸ್ ಬ್ಯಾರಿಕೇಡ್, ವಾಹನ ಪಾರ್ಕಿಂಗ್ ಸ್ಥಳಗಳ ಹಾಗೂ ಹೆಲಿಕಾಪ್ಟರ್ ಇಳಿಸುವ ಕ್ರೀಡಾಂಗಣದ ಮಾಹಿತಿ ಪಡೆದು ಪರಿಶೀಲಿಸಿದರು.

ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೇಡಂ ಉಪ ವಿಭಾಗಾಧಿಕಾರಿ ಪ್ರಭುರೆಡ್ಡಿ, ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸೂಚಿಸಿದರು.

ADVERTISEMENT

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೀಲ ಕರದಾಳ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೆಮೂದ್ ಸಾಹೇಬ್, ಮುಖಂಡರಾದ ಚಂದ್ರಶೇಖರ ಕಾಶಿ, ಮುಕ್ತಾರ್ ಪಟೇಲ್, ನಾಗಯ್ಯ ಗುತ್ತೇದಾರ, ಡಿವೈಎಸ್‌‍ಪಿ ಶಂಕರಗೌಡ ಪಾಟೀಲ, ತಾ.ಪಂ.ಇಒ ಮೊಹ್ಮದ್ ಅಕ್ರಂ ಪಾಷಾ, ಬಿಇಒ ಶಶಿಧರ್ ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಮರತೂರಕರ್, ಪಿಎಸ್ಐ ಮಂಜುನಾಥ ರೆಡ್ಡಿ, ವಾಡಿ ಪಿಎಸ್ಐ ತಿರುಮಲೇಶ, ಲೋಕೋಪಯೋಗಿ ಇಲಾಖೆ ಎಇಇ ಮಹ್ಮದ್ ಸಲೀಂ, ಅಗ್ನಿಶಾಮಕ ಅಧಿಕಾರಿ ನಾಗರಾಜ ಅವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.