ADVERTISEMENT

ಕಲಬುರಗಿ: ಕಾಂಗ್ರೆಸ್‌ನಿಂದಲೂ ಪೋಸ್ಟರ್ ಅಭಿಯಾನ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 18:12 IST
Last Updated 15 ಅಕ್ಟೋಬರ್ 2025, 18:12 IST
ಕಲಬುರಗಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪೋಸ್ಟರ್‌ ಅಂಟಿಸಲಾಯಿತು
ಕಲಬುರಗಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪೋಸ್ಟರ್‌ ಅಂಟಿಸಲಾಯಿತು   

ಕಲಬುರಗಿ: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ನಡೆಸಿದ್ದ ‘ಪೋಸ್ಟರ್‌’ ಅಭಿಯಾನಕ್ಕೆ ಪ್ರತಿಯಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಘಟಕದಿಂದ ಬುಧವಾರ ‘ಪೋಸ್ಟರ್‌’ ಅಂಟಿಸಿ ತಿರುಗೇಟು ನೀಡಲಾಯಿತು.

‘ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್‌ ಅನ್ನೂ ಪ್ರೀತಿಸುತ್ತಾರೆ’ ಎಂಬ ಬರಹವುಳ್ಳ ಪೋಸ್ಟರ್‌ಗಳನ್ನು ಬಿಜೆಪಿ ಅಂಟಿಸಿತ್ತು. ಪ್ರತಿಯಾಗಿ ಕಾಂಗ್ರೆಸ್‌ನವರು ‘ಯಾರು ಸಂವಿಧಾನ ಪ್ರೀತಿಸುತ್ತಾರೋ, ಅವರು ದೇಶವನ್ನೂ ಪ್ರೀತಿಸುತ್ತಾರೆ’, ‘ಯಾರು ದೇಶವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್‌ ಅನ್ನು ಧಿಕ್ಕರಿಸುತ್ತಾರೆ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿ ಪ್ರಿಯಾಂಕ್‌ ಖರ್ಗೆಗೆ ಬೆಂಬಲ ನೀಡಿದರು.

ಪೊಲೀಸರಿಗೆ ದೂರು: ಸಚಿವ ಪ್ರಿಯಾಂಕ್‌ ನಿಂದಿಸಿದ್ಧ, ಬೆದರಿಕೆ ಹಾಕಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಕಲಬುರಗಿ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ.

ADVERTISEMENT

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಯನ್ನು ನಿಷೇಧಿಸುವಂತೆ ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳಿಂದ ಬೆದರಿಕೆ ಕರೆಗಳು ಬರುತ್ತಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ದಿಢೀರ್ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.