ADVERTISEMENT

ಗುರಿ ಮುಟ್ಟಲು ಗಟ್ಟಿ ಛಲ ಬೇಕು: ಡಾ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 1:05 IST
Last Updated 10 ಫೆಬ್ರುವರಿ 2021, 1:05 IST
ಕಲಬುರ್ಗಿಯಲ್ಲಿ ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಅಕ್ಕ ಐಎಎಸ್‌ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಉದ್ಘಾಟಿಸಿದರು
ಕಲಬುರ್ಗಿಯಲ್ಲಿ ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಅಕ್ಕ ಐಎಎಸ್‌ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಉದ್ಘಾಟಿಸಿದರು   

ಕಲಬುರ್ಗಿ: ‘ಸಾಧನೆ ಮಾಡುವವರಿಗೆ ವಯಸ್ಸು, ರೂಪ, ಬಣ್ಣ ಇವುಗಳು ಯಾವವು ಮುಖ್ಯವಾಗುವುದಿಲ್ಲ. ಬದಲಾಗಿ ಅವರಲ್ಲಿರುವ ಉತ್ಸಾಹ, ಸಾಧನೆ ಮಾಡುವಂತಹ ಛಲವೊಂದಿದ್ದರೆ ಸಾಕು. ಅದಕ್ಕೆ ಯಾವುದು ಅಡ್ಡಿ ಬರುವುದಿಲ್ಲ ಎಂದು ಅಕ್ಕ ಐಎಎಸ್‌ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಹೇಳಿದರು.

ನಗರದ ಕನ್ನಡ ಸುವರ್ಣ ಭವನದಲ್ಲಿ ದತ್ತಾತ್ರೇಯ ಎಜುಕೇಶನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಇಂದಿನ ದಿನಗಳಲ್ಲಿ ಹೆಚ್ಚಿನ ಸ್ಪರ್ಧಾತ್ಮಕ ಓದುಗರಿದ್ದಾರೆ. ವಿದ್ಯಾರ್ಥಿಗಳಿದ್ದಾರೆ. ಆದರೆ ಅವರಿಗೆ ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಆ ಪ್ರತಿಭೆಗಳು ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕದಲ್ಲಿ ‘ಯಶಸ್ಸು ಕೋಚಿಂಗ್ ಸೆಂಟರ್’ ಉದ್ಘಾಟನೆ ಗೊಳ್ಳುತ್ತಿರುವುದು ಸಂತೋಷದ ವಿಷಯ ಎಂದರು.

ADVERTISEMENT

ಅತಿಥಿಯಾಗಿದ್ದ ಡಾ.ಎಸ್.ಪಿ.ಮೇಲ್ಕೇರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಕಡೆ ಹೆಚ್ಚಿನ ಗಮನವನ್ನು ಹರಿಸಿ ಇತರೆ ದುಶ್ಚಟಗಳಿಗೆ ಬಲಿಯಾಗದೆ ಬದುಕನ್ನು ಹಸನಾಗಿಸಿ ಕೊಂಡರೆ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.

ಕೆಎಎಸ್ ಅಧಿಕಾರಿ ನೀಲಗಂಗಾ ಹಾಗೂ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಾಂತಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯ ನಿರ್ದೇಶಕ ಪಂಡಿತ್ ಮದುಗುಣಕಿ ಅಧ್ಯಕ್ಷತೆ ವಹಿಸಿದ್ದರು. ರವಿ ಬಿ.ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.