ADVERTISEMENT

ಸಚಿವ ಅಶ್ವತ್ಥನಾರಾಯಣ ವಿರುದ್ಧ ಬಿ.ಆರ್. ಪಾಟೀಲ ದೂರು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 14:28 IST
Last Updated 16 ಫೆಬ್ರುವರಿ 2023, 14:28 IST
   

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬಹಿರಂಗ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬಿ.ಆರ್. ಪಾಟೀಲ ಅವರು ಆಳಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರತಿಯನ್ನು ರಾಜ್ಯಪಾಲರು ಹಾಗೂ ಕಲಬುರಗಿ ಎಸ್ಪಿ ಅವರಿಗೆ ನೀಡಿದ್ದಾರೆ.

‘ಅಶ್ವತ್ಥನಾರಾಯಣ್ ಅವರು ಉನ್ನತ ಶಿಕ್ಷಣ ಸಚಿವರಾಗಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುವುದಾಗಿ ಮತ್ತು ಶಾಂತಿ ಮತ್ತು ಸಹಿಷ್ಣುತೆಗೆ ಧಕ್ಕೆ ತರುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿ ಇಂದು ಪ್ರಮಾಣ ವಚನದ ಮೂಲ ತಳಹದಿಯನ್ನೇ ಉಲ್ಲಂಘಿಸುವ ಮೂಲಕ ಸಮಾಜದ ಶಾಂತಿ, ಸಹಿಷ್ಣುತೆ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ತಂದಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ಅಪರಾಧವೆಸಗಿದ್ದಾರೆ. ಅವರ ಈ ಪ್ರಚೋದನಕಾರಿ ಹೇಳಿಕೆಯನ್ನು ಒಬ್ಬ ಬಿಜೆಪಿ ಮುಖಂಡನೂ ಖಂಡಿಸಿಲ್ಲ. ಇದರರ್ಥ ಇಡೀ ಬಿಜೆಪಿ ಪಕ್ಷ ಸಿದ್ದರಾಮಯ್ಯ ಅವರ ಕೊಲೆಗೆ ಸಂಚು ರೂಪಿಸುತ್ತಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.